ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ  ಹತ್ಯೆ ಪ್ರಕರಣ: ಆರೋಪಿ ಪುನಿತ್ ಕೆರೆಹಳ್ಳಿ ಬಂಧನಕ್ಕೆ ಪೋಲೀಸರ 4 ತಂಡ ರಚನೆ

ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಹತ್ಯೆ ಪ್ರಕರಣ: ಆರೋಪಿ ಪುನಿತ್ ಕೆರೆಹಳ್ಳಿ ಬಂಧನಕ್ಕೆ ಪೋಲೀಸರ 4 ತಂಡ ರಚನೆ

ಬೆಂಗಳೂರು: ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಹತ್ಯೆಯ ಆರೋಪಿ ಸಂಘಪರಿವಾರದ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು 4 ತಂಡಗಳನ್ನು ರಚಿಸಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ,  ಪುನಿತ್ ಕೆರೆಹಳ್ಳಿ ಸೇರಿದಂತೆ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ  ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಹಾಗು ಇದ್ರೀಸ್ ಪಾಷಾ ಸಾವಿಗೆ ಸ್ಪಷ್ಟವಾದ ಕಾರಣ ತಿಳಿಯಲು  ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ಸ್ಪಷ್ಟವಾಗಲಿದೆ ಎಂದರು. 

ಪುನಿತ್ ಕೆರೆಹಳ್ಳಿ ಸೇರಿದಂತೆ ಆರೋಪಿಗಳ ಬಂಧನಕ್ಕಾಗಿ ಪುನಿತ್ ಕೆರೆಹಳ್ಳಿ ಸೇರಿದಂತೆ ಆರೋಪಿಗಳ ಸಾತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಒಂದು ತಂಡ ರಚನೆಯಾಗಿದ್ದರೆ,  ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಮತ್ತೊಂದು ತಂಡ ರಚಿಸಲಾಗಿದೆ. ಉಪ ವಿಭಾಗದ ಪೋಲೀಸರ ನೇತೃತ್ವದಲ್ಲಿ ಮತ್ತೆರಡು ತಂಡ ರಚಿಸಲಾಗಿದೆ ಎಂದು ಮಾಹಿತಿ ನೀಡಿದ ರವಿಕಾಂತೇಗೌಡ, ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪಾಷಾ ಶವ ಪತ್ತೆಯಾದ ನಂತರ ಕೆರೆಹಳ್ಳಿ ಸೇರಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದರು.

ಇದ್ರೀಸ್ ಪಾಷಾನ ಮುಂದೆ ರೂ.2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪುನೀತ್ ಕೆರೆಹಳ್ಳಿ...

ಶನಿವಾರ ಮಧ್ಯರಾತ್ರಿ 12.30 ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಆತನ ಗ್ಯಾಂಗ್ ವಾಹನ ಅಡ್ಡಗಟ್ಟಿದ್ದಾರೆ. ಈ ವೇಳೆ ಇದ್ರೀಸ್ ಪಾಷಾನ ಮುಂದೆ ಪುನೀತ್  ಕೆರೆಹಳ್ಳಿ ಮತ್ತು ಆತನ ಗ್ಯಾಂಗ್  2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಶನಿವಾರ ಬೆಳಿಗ್ಗೆ, ಇದ್ರೀಸ್ ಪಾಷಾ ಅವರ ದೇಹವು ಪೊಲೀಸ್ ಠಾಣೆಯಿಂದ ಕೆಲವು ನೂರು ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ದೇಹದ ಮೇಲೆ ಚಿತ್ರಹಿಂಸೆಯ ಗುರುತುಗಳಿತ್ತು. ಹಂತಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪಾಷಾ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಕೆರೆಹಳ್ಳಿ ಸೇರಿ 4 ಮಂದಿ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article