ಇದ್ರೀಷ್ ಪಾಷ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿದಂತೆ 5 ಮಂದಿಯ ಬಂಧನ; ರಾಜಸ್ಥಾನದಲ್ಲಿ ಸೆರೆಸಿಕ್ಕ ಆರೋಪಿಗಳು
ಬೆಂಗಳೂರು: ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ಜಾನುವಾರು ಮಾರಾಟಗಾರ ಇದ್ರೀಷ್ ಪಾಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ.
ಕಳೆದ 5 ದಿನಗಳಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು 5 ಮಂದಿಯನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾರ್ಚ್ 31 ರಂದು ಪುನೀತ್ ಕೆರೆಹಳ್ಳಿ ಹಾಗೂ ಆತನ ಗ್ಯಾಂಗ್ ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್ ತಡೆದು ಜಾನುವಾರು ಸಾಗಾಟ ಮಾಡುತ್ತಿದ್ದವಾರ ಮೇಲೆ ಗಂಭೀರ ಹಲ್ಲೆ ನಡೆಸಿದ್ದು, ಲಕ್ಷಾನಂತರ ರುಪಾಯಿಗೆ ಬೇಡಿಕೆ ಕೂಡ ಇಟ್ಟಿದ್ದರು ಎನ್ನಲಾಗಿದೆ.
ಹಲ್ಲೆ ನಡೆಸಿದ ಮಾರನೇ ದಿನ ಅಂದರೆ ಏಪ್ರಿಲ್ 1ರಂದು ಕ್ಯಾಂಟರ್ ವಾಹನದಲ್ಲಿದ್ದ ಇದ್ರೀಷ್ ಪಾಷ(35) ಶವವಾಗಿ ಪತ್ತೆಯಾಗಿದ್ದರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಹಲ್ಲೆ ನಡೆಸಿದ ರೀತಿಯ ಗುರುತುಗಳಿದ್ದವು.
ಈ ಸಂಬಂಧ ಮೃತ ಇದ್ರೀಷ್ ಪಾಷ ಸಹೋದರ ಸಾತನೂರು ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು. IPC ಸೆಕ್ಷನ್ 341, 504, 506, 324, 302, 34 ರ ಅಡಿ ಪೊಲೀಸ್ಕೇ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ 5 ದಿನದಿಂದ ಪುನೀತ್ ಮತ್ತು ಆತನ ಗ್ಯಾಂಗ್ ತಲೆ ಮರೆಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ 4 ತಂಡಗಳನ್ನು ರಚಿಸಿದ್ದರು. ಇದೀಗ ಅಂತಿಮವಾಗಿ ಆರೋಪಿಗಳು ರಾಜಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಈ ಮಧ್ಯೆ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ, ನನ್ನ ವಿರುದ್ಧ FIR ದಾಖಲಾಗಿದ್ದರೆ ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಜೆಡಿಎಸ್ ನಾಯಕ ಕುಮಾರಸ್ವಾಮಿ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ ಎಂದು ವಿಡಿಯೋನಲ್ಲಿ ಗುಡುಗಿದ್ದ