ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿ ಇರುವಂತೆಯೇ IT ಅಧಿಕಾರಿಗಳು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆದಿದೆ.
ಬೆಂಗಳೂರಿನ 50 ಕಡೆ ITಅಧಿಕಾರಿಗಳು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆಯ ಮೇಲೆ ಇಂದು ITಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚುನಾವಣಾ ಕಾವು ಜೋರಾಗುತ್ತಿದ್ದಂತೆಯೇ ಕಳೆದ ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು.
ಬುಧವಾರ ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ನ ಮೇಲೆ IT ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಇದೇ ಸಮಾಯದಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.