ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ; ಪತ್ರದಲ್ಲಿ ನೀಡಿದ ಎಚ್ಚರಿಕೆ ಏನು..?

ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ; ಪತ್ರದಲ್ಲಿ ನೀಡಿದ ಎಚ್ಚರಿಕೆ ಏನು..?

ಬೆಂಗಳೂರು: ನಟ ಕಿಚ್ಚ ಸುದೀಪ್ ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ  ಬೆದರಿಕೆ ಪತ್ರ ಬಂದಿದೆ.

ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗ ಈ ಕೇಸ್ ಸಿಸಿಬಿಗೆ ವರ್ಗಾವಣೆ ಆಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ಬೆದರಿಕೆ ಪತ್ರಬರೆದ ಕಿಡಿಗೇಡಿಯನ್ನು ಹುಡುಕುವ ಕೆಲಸ ಆಗುತ್ತಿದೆ.

ಬೆದರಿಕೆ ಪತ್ರ ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಮಾಡಲಾಗಿದ್ದು, ಸುದೀಪ್ ಅವರ ಖಾಸಗಿ ವಿಡಿಯೋ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. 

ಪುಟ್ಟೇನಹಳ್ಳಿ ಪೊಲೀಸರು IPC ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ CM ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದು, ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆಯಿದ್ದು, ಸುದೀಪ್ ಅವರು ಬಿಜೆಪಿಗೆ ಈ ಬಾರಿ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article