ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದೂವರೆ ತಾಸು ಸಫಾರಿ ನಡೆಸಿದ ಪ್ರಧಾನಿ ಮೋದಿ; ಫೋಟೋ ವೈರಲ್
Sunday, April 9, 2023
ಚಾಮರಾಜನಗರ: ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ರವಿವಾರ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ಮೈಸೂರಿನಿಂದ ರವಿವಾರ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಸುತ್ತಾಡಿದ್ದಾರೆ. ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ ಫೋಟೋಗಳು ವೈರಲ್ ಆಗಿವೆ.