ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದ ಯುವ ನಾಯಕ; ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಮತದಾರರು ಭಾಗಿ
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಗುರುವಾರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದ್ದು, ಬಳಿಕ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು, ಮತದಾರರ ಸಮ್ಮುಖದಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ, ಶಕ್ತಿಪ್ರದರ್ಶನ ನಡೆಸಿದ ಇನಾಯತ್ ಅಲಿ, ಕಾವೂರು ಮೈದಾನದಿಂದ ತಾಲೂಕು ಕಚೇರಿವರೆಗೆ ಭರ್ಜರಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಇನಾಯತ್ಅ ಲಿ ಅವರಿಗೆ ಪಕ್ಷದ ನಾಯಕರು, ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು, ಅಭಿಮಾನಿಗಳು ಸಾಥ್ ನೀಡಿದರು.
ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಇನಾಯತ್ ಅಲಿ, ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು, ನನ್ನ ಸೇವಾ ಮನೋಭಾವವನ್ನು ಗುರುತಿಸಿ ಸ್ಪರ್ಧೆಗಿಳಿಸಿದೆ. ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲಾ ಒಂದಾಗಿ ಈ ಬಾರಿ ಚುನಾವಣಾ ಎದುರಿಸಬೇಕಿದೆ. ಈ ನಿಟ್ಟಿನಲ್ಲಿ ನನ್ನನ್ನು ಗೆಲ್ಲಿಸಿ, ನಾನು ಎಲ್ಲ ರೀತಿಯಲ್ಲಿ ಕ್ಷೇತ್ರವನ್ನು ಅಭಿವ್ರಿದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ಹೇಳಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಮಿಥುನ್ ರೈ, ಮಾಜಿ ಮೇಯರ್ ಕವಿತಾ ಸನಿಲ್, ಸುಧೀರ್ ಕುಮಾರ್ ಮುರಳಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಗಿರೀಶ್ ಆಳ್ವ, ಶಾಹುಲ್ ಹಮೀದ್, ನೀರೇಶ್ ಪಾಲ್, ಉಮೇಶ್ ದಂಡೆಕೇರಿ, ಯು.ಪಿ.ಇಬ್ರಾಹಿಂ, ಶಶಿಕಲಾ ಪದ್ಮನಾಭ, ಜೇಸನ್ ಸುರತ್ಕಲ್, ಮುಫಿದಾ, ಚಂದ್ರಹಾಸ್ ಪೂಜಾರಿ, ಶ್ರೀನಿವಾಸ್ ಸಾಲಿಯಾನ್, ಆನಂದ ಅಮೀನ್, ನೀರಜ್ ಪಾಲ್, ಮಂಗಳೂರು ಉತ್ತರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಯ ವೇಳೆ ಕಾಸರಗೋಡಿನ ಕುಂಬೋಲ್ ತಂಗಳ್ ಮಸೀದಿ ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ, ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ಗೆ ಭೇಟಿ ನೀಡಿದ ಇನಾಯತ್ ಅಲಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.