ನಾಳೆ ರಾಹುಲ್ ಗಾಂಧಿ ಉಚ್ಚಿಲಕ್ಕೆ: ಮೀನುಗಾರರ ಸಮಾವೇಶ, ಸಂವಾದ ಕಾರ್ಯಕ್ರಮದಲ್ಲಿ ಭಾಗಿ
ಉಚ್ಚಿಲ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಾಳೆ (ಏಪ್ರಿಲ್ 27 ರ ಗುರುವಾರ) ಉಚ್ಚಿಲಕ್ಕೆ ಆಗ್ಮಸಿಡಲಿದ್ದಾರೆ.
ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶ ಹಾಗು ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
ಗುರುವಾರದಂದು ಅಪಾರಾಹ್ನ 3.00 ಗಂಟೆಗೆ ಉಡುಪಿಯ ಆದಿ-ಉಡುಪಿ ಹೆಲಿಪ್ಯಾಡ್'ಗೆ ಬಂದಿಳಿದು, ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಮೀನುಗಾರ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ.
ಅವರ ಆಗಮನದ ಸಂದರ್ಭದಲ್ಲಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಳೂರಿನಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಯಲಿದೆ.
ಈ ರೋಡ್ ಶೋ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಹಾಗೂ ಪಕ್ಷದ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷಜಿತೇಂದ್ರ ಫುರ್ಟಾಡೋ ಹೇಳಿದ್ದಾರೆ.