ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಭುಗಿಲೆದ್ದ ಬಂಡಾಯ; ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ; ಬಿಜೆಪಿಗೆ ಬಿಸಿತುಪ್ಪವಾದ ಟಿಕೆಟ್ ಹಂಚಿಕೆ

ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಭುಗಿಲೆದ್ದ ಬಂಡಾಯ; ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ; ಬಿಜೆಪಿಗೆ ಬಿಸಿತುಪ್ಪವಾದ ಟಿಕೆಟ್ ಹಂಚಿಕೆ

ಬೆಂಗಳೂರು: ರಾಜ್ಯ ಬಿಜೆಪಿಯಿಂದ ಈ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗಿರುವ ಬೆನ್ನಲ್ಲೇ ಟಿಕೆಟ್ ವಂಚಿತ ಹಾಲಿ ಶಾಸಕರು ಮತ್ತು ಸಚಿವರಿಂದ ಅಸಮಾಧಾನ, ಬಂಡಾಯ ಭುಗಿಲೆದ್ದಿದೆ.

ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, 18 ಕ್ಷೇತ್ರಗಳಿಗೆ ಮಂಗಳವಾರ ರಾತ್ರಿ ಬಿಜೆಪಿ ಟಿಕೆಟ್​ ಹಂಚಿಕೆ ಮಾಡಿದೆ. ಆದರೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಇಬ್ಬರು ಹಾಲಿ ಶಾಸಕರು ಸೇರಿದಂತೆ ಒಟ್ಟು 8 ಮಂದಿ ಆಕಾಂಕ್ಷಿಗಳಿಗೆ ಟಿಕೆಟ್​ ಕೈತಪ್ಪಿದ್ದು, ಲಕ್ಷ್ಮಣ ಸವದಿ ಈಗ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದಾರೆ.

ಬುಧವಾರ ಸುದ್ದಿಗೋಷ್ಠಿ ಕರೆದ ಲಕ್ಷ್ಮಣ ಸವದಿ, ಅತ್ಯಂತ ಭಾವುಕರಾಗಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ನಾನು ಪಕ್ಷ ಸಂಘಟನೆಗಾಗಿ, ಪಕ್ಷಕ್ಕಾಗಿ ಬಹಳಷ್ಟು ದುಡಿದಿದ್ದೇನೆ, ಹೀಗಿದ್ದರೂ ನನಗೇಕೆ ಟಿಕೆಟ್ ನಿರಾಕರಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ.ಈ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ಗುರುವಾರ ಕ್ಷೇತ್ರದ ಜನರ ಜತೆ ಚರ್ಚಿಸಿ ನನ್ನ ಮುಂದಿನ ನಿರ್ಧಾರ ಘೋಷಣೆ ಮಾಡುತ್ತೇನೆ. BJP ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದರು.

ಮಾಜಿ CM ಬಿಎಸ್​ ಯಡಿಯೂರಪ್ಪ ಅವರ ಅತ್ಯಾಪ್ತ, ಡಾ. ವಿಶ್ವನಾಥ ಪಾಟೀಲ್ ಅವರಿಗೆ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ BJP ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

MLC ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದ BJP ಟಿಕೆಟ್​​ ಕೈ ತಪ್ಪಿದ ಹಿನ್ನೆಲೆ ಸವದಿ ನಿವಾಸಕ್ಕೆ, ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ಲಕ್ಷ್ಮಣ್ ಸವದಿಯನ್ನು ಕಾಂಗ್ರೆಸ್ ಗೆ ಕರೆತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

Ads on article

Advertise in articles 1

advertising articles 2

Advertise under the article