ನನಗೆ ಟಿಕೆಟ್ ನೀಡದಿದ್ದರೆ ಕನಿಷ್ಠ 20 ರಿಂದ 25 ಸ್ಥಾನಗಳಲ್ಲಿ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತದೆ; ನಾಳೆಯ ವರೆಗೆ ಬಿಜೆಪಿಗೆ ಗಡುವು ನೀಡಿದ ಜಗದೀಶ್ ಶೆಟ್ಟರ್

ನನಗೆ ಟಿಕೆಟ್ ನೀಡದಿದ್ದರೆ ಕನಿಷ್ಠ 20 ರಿಂದ 25 ಸ್ಥಾನಗಳಲ್ಲಿ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತದೆ; ನಾಳೆಯ ವರೆಗೆ ಬಿಜೆಪಿಗೆ ಗಡುವು ನೀಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಈ ಬಾರಿಯ ಚುನಾವಣೆಯಲ್ಲಿ ನನಗೆ ಟಿಕೆಟ್ ನಿರಾಕರಿಸಿದರೆ ಕನಿಷ್ಠ 20 ರಿಂದ 25 ಸ್ಥಾನಗಳಲ್ಲಿ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಕ್ಷದ ಹೈಕಮಾಂಡಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ. 

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ವಂಚಿತರ ಪಟ್ಟಿಗೆ ಸೇರ್ಪಡೆಯಾಗುತ್ತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶನಿವಾರ ಸುದ್ದಿಗಾರರೊದಿಗೆ ಮಾತನಾಡಿದ್ದು, ಟಿಕೆಟ್ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕಾಗಿ ರವಿವಾರದವರೆಗೂ ಕಾಯುತ್ತೇನೆ. ನಂತರ ತಾನು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿದಂತೆ ರಾಜ್ಯದ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ, ರವಿವಾರದವರೆಗೂ ಕಾದು ನಂತರ ಮುಂದಿನ ನಡೆ ನಿರ್ಧರಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. 

ನನಗೆ ಟಿಕೆಟ್ ಸಿಗದಿದ್ದರೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಒಂದೇ ಕಡೆ ಅಲ್ಲ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಮಾಜಿ CM ಬಿಎಸ್ ಯಡಿಯೂರಪ್ಪ ಕೂಡ ಹೇಳಿದ್ದಾರೆ ಎಂದು ಶೆಟ್ಟರ್ ಹೇಳಿದರು.

Ads on article

Advertise in articles 1

advertising articles 2

Advertise under the article