ಧರ್ಮ ರಕ್ಷಣೆಯ ಹೆಸರಲ್ಲಿ BJP ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ಗೋರಕ್ಷಣೆಯ ಹೆಸರಲ್ಲಿ ನಡೆದ ಯುವಕನ ಹತ್ಯೆ ಸಾಕ್ಷಿ: ಸಿದ್ದರಾಮಯ್ಯ ಕಿಡಿ

ಧರ್ಮ ರಕ್ಷಣೆಯ ಹೆಸರಲ್ಲಿ BJP ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ಗೋರಕ್ಷಣೆಯ ಹೆಸರಲ್ಲಿ ನಡೆದ ಯುವಕನ ಹತ್ಯೆ ಸಾಕ್ಷಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಧರ್ಮ ರಕ್ಷಣೆಯ ಹೆಸರಲ್ಲಿ BJP ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ಗೋರಕ್ಷಣೆಯ ಹೆಸರಲ್ಲಿ ನಡೆದ  ಯುವಕನ ಹತ್ಯೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಗೋರಕ್ಷಣೆಯ ಹೆಸರಲ್ಲಿ ನಡೆದ ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು. ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಗುಡುಗಿದ್ದಾರೆ.

ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು, ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ ಎಂದಿರುವ ಸಿದ್ದರಾಮಯ್ಯ, ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ, ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ, ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Ads on article

Advertise in articles 1

advertising articles 2

Advertise under the article