ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ; 6 ಮಂದಿ ದುರ್ಮರಣ
Sunday, May 28, 2023
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ರವಿವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿರುವ ಘಟನೆ ನಡೆದಿದೆ.
ಮೃೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮೀಕಾ ಎಂದು ಗುರುತಿಸಲಾಗಿದೆ.
ಇಂಡಿಕಾ ಕಾರಿನ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.