ಗುರುಪುರ ಕೈಕಂಬದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ ಇನಾಯತ್ ಅಲಿ
Wednesday, May 24, 2023
ಮಂಗಳವಾರ ಗುರುಪುರ ಕೈಕಂಬದ ಮೆಘಾ ಪ್ಲಾಝಾ ಹಾಲ್‌ನಲ್ಲಿ ನಡೆದ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುವ ಗ್ಯಾರಂಟಿ ಹಾಗೂ ಯೋಜನೆಗಳನ್ನು ಕ್ಷೇತ್ರದ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯವನ್ನು ಕೈಗೊಳ್ಳಲು ಕಾರ್ಯಕರ್ತರು ಮುಂದಾಗಬೇಕು ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸದಾ ಸ್ಪಂದಿಸಬೇಕು ಎಂದು ಸಭೆಯನ್ನುದ್ದೇಶಿಸಿ ತಿಳಿಸಿದರು.
ಬಳಿಕ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.