ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ: ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ: ದೂರು ದಾಖಲು

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬಹಿರಂಗ ಸಭೆಯೊಂದರಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ.

ಈ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ ಇದು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹೇಳಿಕೆಯ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಪುತ್ತೂರು ಮತ್ತು ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷ ಪ್ರಕರಣವನ್ನೂ ದಾಖಲಿಸಿದೆ.

ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪುತ್ತೂರು ನಗರ ಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. 

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಹರೀಶ್ ಪುಂಜಾ ಹೇಳಿದ್ದೇನು?

ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಹೇಳಿದ್ದರು.

ಚುನಾವಣಾ ಫಲಿತಾಂಶ ಬರೋತನಕ ಸುಮ್ಮನಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಹಿಂದುತ್ವಕ್ಕಾಗಿ ಅನೇಕ ವರ್ಷ ಹೋರಾಟ ಮಾಡಿ ಇತ್ತೀಚೆಗೆ ಸಂಘಪರಿವಾರದಿಂದ ಹೊರಬಂದಿದ್ದ ಬಿಲ್ಲವ ಸಮುದಾಯದ ಮುಖಂಡ ಸತ್ಯಜಿತ್ ಸುರತ್ಕಲ್ ವಿರುದ್ಧ ಕಿಡಿಕಾರಿದ್ದ ಶಾಸಕ ಹರೀಶ್ ಪೂಂಜಾ, ಸತ್ಯಣ್ಣ, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Ads on article

Advertise in articles 1

advertising articles 2

Advertise under the article