ಬಿಜೆಪಿಯ ಹೀನಾಯ ಸೋಲು; ನಳಿನ್ ಕುಮಾರ್ ಕಟೀಲ್ ಕೆಳಗಿಳಿಸಲು ಮುಂದಾದ ಹೈಕಮಾಂಡ್; ವಿಪಕ್ಷ ನಾಯಕನ ಸ್ಥಾನಕ್ಕಾಗಿ ಹುಡುಕಾಟ

ಬಿಜೆಪಿಯ ಹೀನಾಯ ಸೋಲು; ನಳಿನ್ ಕುಮಾರ್ ಕಟೀಲ್ ಕೆಳಗಿಳಿಸಲು ಮುಂದಾದ ಹೈಕಮಾಂಡ್; ವಿಪಕ್ಷ ನಾಯಕನ ಸ್ಥಾನಕ್ಕಾಗಿ ಹುಡುಕಾಟ

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೆಳಗಿಳಿಸಲು ಬಿಜೆಪಿ ಮುಂದಾಗಿದೆ.

ಜೊತೆಗೆ ಬಸವರಾಜ ಬೊಮ್ಮಾಯಿ ಅವರು ಕೂಡಾ ಈ ಹೀನಾಯ ಸೋಲಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಪ್ರಬಲ ನಾಯಕ ನೇಮಕಗೊಳ್ಳುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

224 ಕ್ಷೇತ್ರಗಳ ಪೈಕಿ ಅರ್ಧದಷ್ಟು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದ ಬಿಜೆಪಿ ಕೇವಲ 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಯಾವುದೇ ಹೊಸ ಪ್ರಯೋಗದತ್ತ ಚಿತ್ತ ಹರಿಸಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕಟೀಲ್ ತಾನಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ಅವರ ಕಾರ್ಯವೈಖರಿ ಅತೃಪ್ತಿಕರವಾಗಿದೆ. ದೆಹಲಿಯ ಪಕ್ಷದ ನಾಯಕರು ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ 2022 ರಲ್ಲಿ ಕೊನೆಗೊಂಡಿತ್ತು. ಆದರೆ, ವಿಧಾನಸಭಾ ಚುನಾವಣೆ ಇದ್ದ ಕಾರಣ ಕಟೀಲ್ ಅವರನ್ನು ಬದಲಾಯಿಸದೇ ರಾಜ್ಯಾಧ್ಯಕ್ಷ ಸ್ಥಾನದಲ್ಲೇ ಮುಂದುವರಿಸಲಾಗಿತ್ತು. ಕಟೀಲ್ ಅವರೇ ಮುಂದುವರಿಯುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಬೆಂಬಲಿಸಿದ್ದರು.

Ads on article

Advertise in articles 1

advertising articles 2

Advertise under the article