ಮಾರ್ಪಳ್ಳಿಯಲ್ಲಿ ಮಾತಾಯಾಚನೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ; ಇನ್ನೂ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಬಿಜೆಪಿ ಎಂಬಲಿಸಿ ಎಂದ ಲಾಲಾಜಿ ಮೆಂಡನ್
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಪ್ರದೇಶದಲ್ಲಿ ಮಾತಾಯಾಚನೆ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ರವರು ಮಾರ್ಪಳ್ಳಿ ಪ್ರದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಗುರ್ಮೆ ಸುರೇಶ್ ಶೆಟ್ಟಿ ಯವರು ಇನ್ನು ಹೆಚ್ಚಾಗಿ ಮಾಡಲಿದ್ದಾರೆ ಎಂಬ ಭರವಸೆ ನೀಡಿದರು.
ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು, ನರೇಂದ್ರ ಮೋದಿಯವರು ದೇಶಕ್ಕೆ ನೀಡಿರುವ ಕೊಡುಗೆಗಳ ವಿವರ ನೀಡಿ ಭಾರತ ದೇಶವು ಅವರ ಸಾರಥ್ಯದಲ್ಲಿ ವಿಶ್ವಗುರು ಅಗಲಿದೆ ಎಂಬ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಮಾರ್ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಹೇಮಂತ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯದರ್ಶಿ ಅವಿನಾಶ್ ಶೆಟ್ಟಿಗಾರ್, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್, ಶಕ್ತಿ ಕೇಂದ್ರ ಪ್ರಮುಖ್ ಆಶಿಕ್, ಪಂಚಾಯತ್ ಸದಸ್ಯರಾದ ಪುಷ್ಪಲತಾ, ಶಾಂತ ನಾಯಕ್, ಉದ್ಯಾವರ ಪಂಚಾಯತ್ ಉಪಾಧ್ಯಕ್ಷರು ಬೇಬಿ ನಾಯಕ್, ಮಾರ್ಪಳ್ಳಿ ಭೂತ್ ಅಧ್ಯಕ್ಷ ಅಕ್ಷಯ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.