
ಬಿಜೆಪಿ ಕಾರ್ಯಕರ್ತರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಅನುಗ್ರಹ ಪಡೆದ ಗುರ್ಮೆ ಸುರೇಶ್ ಶೆಟ್ಟಿ
Thursday, May 4, 2023
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬೈರಂಪಳ್ಳಿ ಗ್ರಾಮ ಪಂಚಾಯತ್ ಶಿರೂರು ಮೂಲಮಠ ಮುಖ್ಯಪ್ರಾಣ ದೇವಸ್ಥಾನಕ್ಕೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಗದ್ದಿಗೆ 41 ನೇ ಶಿರೂರು ಜಂಬೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಅನುಗ್ರಹ ಪಡೆದರು.
ಈ ಸಂದರ್ಭದಲ್ಲಿ ಪೆರ್ಡೂರ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳಾರ್ ಪಾಡಿ, ಬೈರಂಪಳ್ಳಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್ ಬಡಗುಬೆಟ್ಟು, ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಪೂಜಾರಿ, ಭೂತ್ ಅಧ್ಯಕ್ಷರು ಪ್ರದೀಪ್ ಶೆಟ್ಟಿ, ಪಿಡಬ್ಲ್ಯೂ ಕಂಟ್ರಾಕ್ಟರ್ ಸತೀಶ್ ಶೆಟ್ಟಿ ಕುತ್ಯಾರು ಬೀಡು ಹಾಗೂ ಬಿಜೆಪಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.