ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ರಚಿಸುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ 128, ಬಿಜೆಪಿ 67, ಜೆಡಿಎಸ್ 22 ಹಾಗು ಇತರರು 7 ಮುನ್ನಡೆಯಲ್ಲಿದ್ದಾರೆ.
ಹಲವು ಕಡೆಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದ್ದು, ಬಹತೇಕ ಕಡೆ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮನೆಮಾಡಿದೆ.