ಚುನಾವಣಾ ಬ್ರೇಕಿಂಗ್ : ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮುನ್ನಡೆ
Saturday, May 13, 2023
ಈ ಬಾರಿಯ ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಬಿಜೆಪಿ 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಕೇವಲ 2 ಸ್ಥಾನದಲ್ಲಷ್ಟೇ ಮುನ್ನಡೆಯಲ್ಲಿದೆ.
ಬೆಳ್ತಂಗಡಿ ಬಿಜೆಪಿಯ ಹರೀಶ್ ಪೂಂಜಾ, ಮಂಗಳೂರು ದಕ್ಷಿಣದಲ್ಲಿ ಬಿಜೆಪಿಯ ವೇದವ್ಯಾಸ್ ಕಾಮತ್, ಸುಳ್ಯದಲ್ಲಿ ಬಿಜೆಪಿಯ ಭಾಗೀರಥಿ ಮುರುಳ್ಯ ಬಂಟ್ವಾಳದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್, ಮಂಗಳೂರು ಉತ್ತರದಲ್ಲಿ ಬಿಜೆಪಿಯ ಭರತ್ ಶೆಟ್ಟಿ, ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಯು.ಟಿ.ಖಾದರ್, ಪುತ್ತೂರಿನಲ್ಲಿ ಕಾಂಗ್ರೆಸ್ಸಿನ ಅಶೋಕ್ ರೈ ಮುನ್ನಡೆಯಲ್ಲಿದ್ದಾರೆ.