ನನ್ನನ್ನು ನಿಮ್ಮ ಮನೆಯ ಮಗನೆಂದು ತಿಳಿದು ಮತ ಹಾಕಿ ಗೆಲ್ಲಿಸಿ, ನಿಮ್ಮೆಲ್ಲ ಕಷ್ಟಕ್ಕೆ ನಾನು ಧ್ವನಿಯಾಗುತ್ತೇನೆ: ಸುರೇಶ್ ಶೆಟ್ಟಿ ಗುರ್ಮೆ
Monday, May 1, 2023
ಕಟಪಾಡಿ: ಅಲೆವೂರು ಪ್ರಗತಿ ನಗರದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಭಾವಗವಹಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿ, ನನ್ನನ್ನು ನಿಮ್ಮ ಮನೆಯ ಮಗನೆಂದು ತಿಳಿದು ಮತ ಹಾಕಿ ಗೆಲ್ಲಿಸಿ, ನಿಮ್ಮೆಲ್ಲ ಸಮಸ್ಯೆಗಳನ್ನು ಈಡೇರಿಸುವ ಜೊತೆಗೆ, ನಿಮ್ಮೆಲ್ಲ ಕಷ್ಟಕ್ಕೆ ನಾನು ಧ್ವನಿಯಾಗುತ್ತೇನೆ ಎಂದರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಈ ಬಾರಿಯೂ ಜನ ಬಿಜೆಪಿ ಪರವಾಗಿದ್ದು, ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.