ಬೆಳಪು ಶ್ರೀ ಕಾಳಿಕಾಂಬಾ ಸೇವಾ ಭಜನಾ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಕಾಳಿಕಾಂಬಾ ಸೇವಾ ಭಜನಾ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು, ನೀವು ಮತ ಹಾಕಿ ಗೆಲ್ಲಿಸಿದದಲ್ಲಿ ನೀವು ತಲೆತಗ್ಗದ ರೀತಿಯಲ್ಲಿ ಕೆಲಸ ಮಾಡಿ ಕೊಡುತ್ತೇನೆ ನಿಮ್ಮ ಮತಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತೇನೆ ಎಂಬ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್, ಶಕ್ತಿಕೇಂದ್ರ ಅಧ್ಯಕ್ಷರಾದ ಸುರೇಶ್ ದೇವಾಡಿಗ, ಬಬ್ಬು ಸ್ವಾಮಿ ದೇವಸ್ಥಾನದ ಗುರಿಕಾರು ಹಾಗೂ ಬೆಳಪು ಭೂತ್ ಅಧ್ಯಕರು ಶಂಕರ್ ಬೆಳಪು, ಎಲ್ಲೂರು ವಿಶ್ವನಾಥ ದೇವಸ್ಥಾನದ ಕಮಿಟಿ ಸದಸ್ಯರು ಕೆ ಕೊರಗ, ಕಾಳಿಕಾಂಬ ಭಜನಾ ಮಂಡಳಿ ಆಡಳಿತ ಮುಖ್ಯಸ್ಥರು, ಕಾನಾ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥರು, ಬೆಳಪು ಭೂತ್ ಅಧ್ಯಕ್ಷರು ಬಾಲಕೃಷ್ಣ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.