ನನ್ನ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನೋಡಿ ನನ್ನನ್ನು ಕಣಕ್ಕಿಳಿಸಿದೆ; ಇನ್ನಷ್ಟು ಕಾರ್ಯಕ್ಕೆ ನಿಮ್ಮ ಬೆಂಬಲ ಅಗತ್ಯ: ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್'ಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಗುರ್ಮೆ ಸುರೇಶ್ ಶೆಟ್ಟಿ

ನನ್ನ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನೋಡಿ ನನ್ನನ್ನು ಕಣಕ್ಕಿಳಿಸಿದೆ; ಇನ್ನಷ್ಟು ಕಾರ್ಯಕ್ಕೆ ನಿಮ್ಮ ಬೆಂಬಲ ಅಗತ್ಯ: ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್'ಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಮಣಿಪಾಲ್ ನಗರ ವ್ಯಾಪ್ತಿಯ  ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಯೂನಿಟ್ lV ಗೆ ಭೇಟಿ ನೀಡಿ ಮಾತಾಯಾಚನೆ ಮಾಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀ ಲಾಲಾಜಿ ಮೆಂಡನ್ ರವರು ನನ್ನ ಅಧಿಕಾರದ ಅವಧಿಯಲ್ಲಿ ಕಾಪು ಕ್ಷೇತ್ರಕ್ಕಾಗಿ ಹಗಲಿರುಳು ದುಡಿದಿದ್ದೇನೆ ಇನ್ನು ಈ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ಚೆನ್ನಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.ಅದಕ್ಕಾಗಿ ನಿಮ್ಮ ಬೆಂಬಲ ಅವರಿಗೆ ಸಂಪೂರ್ಣವಾಗಿ ನೀಡಬೇಕು ಎಂದು ಕೇಳಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿಯವರು ನನ್ನ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನೋಡಿ ಹಾಗೂ ನಾನು ಮಾಡಿದ ಕೆಲಸವನ್ನು ನೋಡಿ ನನಗೆ ಈ ಜವಾಬ್ದಾರಿಯನ್ನು ಕೊಟ್ಟಿದೆ. ಹಾಗಾಗಿ ಕಾಪು ಕ್ಷೇತ್ರ ವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಗೊಳಿಸುವ ಕನಸು ಇದೆ ಎಂದು ಹೇಳಿದರು ಇದಕ್ಕೆ ನಿಮ್ಮ ಬೆಂಬಲ ಅಗತ್ಯ ಮೇ 10 ರಂದು ತಪ್ಪದೆ ಮತದಾನ ಮಾಡಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಕಾರಣವಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಉದ್ಯಮಿಯಾದ ದಿನೇಶ್, ಮಾನವ ಸಂಪನ್ಮೂಲದ  ಮುಖ್ಯಸ್ಥರು ಶ್ರೀನಿವಾಸ್ ರಾವ್, ಹಾಗೂ ಯುನಿಟ್ ಹೆಡ್ ಸತೀಶ್ ಪ್ರಭು, ಮಣಿಪಾಲ್ ಟೆಕ್ನಾಲಜೀಸ್ ನ AVP  ಪ್ರಸಾದ್,ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article