ಕುತ್ಯಾರು ವಿದ್ಯಾದಾಯಿನಿ ಶಾಲೆಯಲ್ಲಿ ನಡೆದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Saturday, May 27, 2023
ಕಾಪು: ಶನಿವಾರ ಕಾಪು ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕುತ್ಯಾರು ವಿದ್ಯಾದಾಯಿನಿ ಶಾಲೆಯಲ್ಲಿ ನಡೆದ ಕುತ್ಯಾರು ಸಾಯಿನಾಥ ಶೆಟ್ಟಿಯವರ ನೇತೃತ್ವದ ಸಾಯಿ ಕ್ರಿಯೇಷನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುಮಾರು 198 ಪಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡರು. ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರು ಲತಾ ಆಚಾರ್ಯ, ಸಾಯಿ ಕ್ರಿಯೇಷನ್ ಪ್ರವರ್ತಕರು ಸಾಯಿನಾಥ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ, ಸ್ಥಳೀಯ ಪ್ರಮುಖರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಪ್ರಸಾದ್ ಕುತ್ಯಾರು ಹಾಗೂ ಇನ್ನಿತರರು, ಪಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.