
ಜನರ ಸೇವೆಗೆ ನಾನು ಸದಾ ಸಿದ್ಧ: ವಿಜಯೋತ್ಸವದ ಸಮಾರೋಪದಲ್ಲಿ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಪಂಚಾಯತ್ ಗಳಿಗೆ ಭೇಟಿ ನೀಡಿ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭ ನಡೆದ ರೋಡ್ ಶೋ ದಲ್ಲಿ ಗುರ್ಮೆ ಅವರು ತಾವು ನೀಡಿದ ವಚನಕ್ಕೆ ಬದ್ದರಿರುವುದಾಗಿ ಹೇಳಿದರು.ತಾನು ಕ್ಷೇತ್ರದ ಮತದಾರರಿಗೆ ಚಿರ ಋಣಿಯಾಗಿರುವುದಾಗಿರುತ್ತೇನೆ ಎಂಬುದನ್ನು ಅವರು ಪುನರುಚ್ಚರಿಸಿದರು.
ಕಳತ್ತೂರಿನಲ್ಲಿ ನಡೆದ ಮೊದಲನೇ ದಿನದ ವಿಜಯೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಂದಿನ ಐದು ವರ್ಷಗಳಿಗೆ ತಮ್ಮನ್ನು ಚುನಾಯಿಸಿದ ಮತದಾರರಿಗೆ ತಾವು ಕಾಯಾ ವಾಚಾ ಮನಸಾ ಸೇವೆ ಸಲ್ಲಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್, ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿಗಳಾದ ಶ್ರೀ ಉದಯ್ ಕುಮಾರ್ ಶೆಟ್ಟಿ, ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಶಿಲ್ಪಾ ಜಿ ಸುವರ್ಣ, ಗಂಗಾಧರ್ ಸುವರ್ಣ, ಲತಾ ಆಚಾರ್ಯ, ಸುಮಾ ಶೆಟ್ಟಿ, ಸುರೇಂದ್ರ ಪನಿಯೂರು, ಗೋಪಾಲಕೃಷ್ಣ ರಾವ್, ಸಚಿನ್ ಸುವರ್ಣ ಪಿತ್ರೋಡಿ, ಸಂತೋಷ ಮೂಡುಬೆಳ್ಳೆ ಸೇರಿದಂತೆ ಹಿರಿಯ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.