ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.
ಈ ವೇಳೆ ಮಾತನಾಡಿದ ಇನಾಯತ್ ಅಲಿ, ಪ್ರತಿಯೊಬ್ಬರೂ ತಪ್ಪದೇ ತಮ್ಮ ಅತ್ಯಮೂಲ್ಯವಾದ ಮತ ಚಲಾಯಿಸಿ, ಪ್ರಜಾಪ್ರಭುತ್ವ ಬಲಪಡಿಸುವಂತೆ ಮನವಿ ಮಾಡಿದರು.