ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನಾ ಸಭೆ-ಧನ್ಯವಾದ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನಾಯತ್ ಅಲಿ
Sunday, May 28, 2023
ಪಚ್ಚನಾಡಿ ವಾರ್ಡ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕರ್ತರ ಸಮಾಲೋಚನಾ ಸಭೆ ಹಾಗೂ ಧನ್ಯವಾದ ಸಮರ್ಪಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.
ಚುನಾವಣೆಯ ಸಂದರ್ಭ ನಿಸ್ವಾರ್ಥವಾಗಿ ದುಡಿದು ಪಕ್ಷಕ್ಕೆ ಶಕ್ತಿ ತುಂಬಿದ ಕಾರ್ಯಕರ್ತರನ್ನು ಹಾಗೂ ವಾರ್ಡ್ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳನ್ನು ಅಭಿನಂದಿಸಿದರು. ಈ ಸಂದರ್ಭ ಸ್ಥಳೀಯ ಪ್ರದೇಶದ ಸಮಸ್ಯೆಗಳ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಪಡೆದುಕೊಂಡರು.