ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಭಾರತವನ್ನು 85 ನೇ ಸ್ಥಾನಕ್ಕೆ ಕುಸಿಯುವಂತೆ ಮಾಡಿದ್ದಾರೆ: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಸಾದ್ ರಾಜ್ ಕಾಂಚನ್
Saturday, May 6, 2023
ಬ್ರಹ್ಮಾವರ: ಮನಮೋಹನ್ ಸಿಂಗ್ ಆಡಳಿತದ ಅವಧಿಯಲ್ಲಿ ದೇಶವನ್ನು ಸಂಪೂರ್ಣ ಅಭಿವೃದ್ಧಿಯಲ್ಲಿ ಪ್ರಪಂಚದಲ್ಲೇ ಐದನೇ ಸ್ಥಾನಕ್ಕೇರಿಸಿದ್ದರು. 2014 ರ ನಂತರ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಭಾರತವನ್ನು 85 ನೇ ಸ್ಥಾನಕ್ಕೆ ಕುಸಿಯುವಂತೆ ಮಾಡಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಹೇಳಿದ್ದಾರೆ.
ಅವರು ಇಂದು ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರ ಬ್ಲಾಕ್ ವ್ಯಾಪ್ತಿಯ ಹಾವಂಜೆ ಸ್ನೇಹ ಸರ್ಕಲ್ ಬಳಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಸುಧಾಕರ್ ಶೆಟ್ಟಿ ಮೇರ್ಮಾಡಿ, ಭುಜಂಗ ಶೆಟ್ಟಿ, ಸಂಜೀವ ಮ್ಯಾಡಿ, ಶ್ರೀನಿವಾಸ ಗುಲ್ವಾಡಿ, ರಮೇಶ್ ಶೆಟ್ಟಿ ಹಾವಂಜೆ ಉಪಸ್ಥಿತರಿದ್ದರು.