ಡಾ.ಯು.ಕೆ.ಮೋನು ಕಣಚೂರುಗೆ 'ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್'
Tuesday, May 30, 2023
ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಕರ್ನಾಟಕ ನೀಡುವ 'ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್'ಗೆ ಸಾಮಾಜಿಕ ಮುಂದಾಳು, ಖ್ಯಾತ ಉದ್ಯಮಿ ಡಾ. ಯುಕೆ. ಮೋನು ಕಣಚೂರು ಅವರು ಆಯ್ಕೆಗೊಂಡಿದ್ದಾರೆ.
ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಡಾ. ಯುಕೆ. ಮೋನು ಕಣಚೂರು ಅವರನ್ನು 2023ನೇ ಸಾಲಿನ ಅವಾರ್ಡ್‌ಗೆ ಆಯ್ಕೆ ಮಾಡಲಾಗಿದೆ ಎಂದು ಸಂಘಟಕ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 6ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.