ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ; ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯನ್ನು ಬೆಂಬಲಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ; ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯನ್ನು ಬೆಂಬಲಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ BJP ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.

ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ,  ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. 

ನಂತರ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾತನಾಡಿ, ಪಕ್ಷದದಲ್ಲಿ ಮಾಡಿದ ನಿಸ್ವಾರ್ಥ ಸೇವೆಯ ಮುಂದಿನ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು  ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಕೊಟ್ಟರು. 

ಬಳಿಕ ಗುರ್ಮೆ ಸುರೇಶ್ ಶೆಟ್ಟಿವರು ಮಾತನಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಪರಿಹಾರದ ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ  ಸುಲೋಚನಾ ಭಟ್ ಬಂಟ್ವಾಳ  ಹಾಗೂ ಕಾಪು ಪುರಸಭಾ ಸದಸ್ಯರಾದ  ಹರಿಣಿ ಹಾಗೂ ಅನುಸೂಯ ಕಾಂಪ್ಲೆಕ್ಸ್ ನ ಅಧ್ಯಕ್ಷರಾದ ಡಾ. ಶ್ವೇತಾ ರವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article