ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಲಿತ ವಿದ್ಯೆಗೆ ತಕ್ಕಂತೆ ಯುವಕರಿಗೆ ಯಾವುದೇ ಉದ್ಯೋಗ ಸೃಷ್ಠಿಗೆ ಬಿಜೆಪಿ ಅವಕಾಶವನ್ನು ಮಾಡಿಲ್ಲ: ಬಿಜೆಪಿ ವಿರುದ್ಧ ಹರಿಹಾಯ್ದ ಪ್ರಸಾದ್ ರಾಜ್ ಕಾಂಚನ್
ಬ್ರಹ್ಮಾವರ: ಜನಾರ್ಧನ್ ಪೂಜಾರಿಯವರು ಹಣಕಾಸು ಮಂತ್ರಿಯಾಗಿದ್ದಾಗ ಬ್ಯಾಂಕಿಂಗ್ ವ್ಯವಸ್ಥೆ ಮೂಲಕ ಸಾಲ-ಮೇಳದಂತಹ ಯೋಜನೆಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಬಹಳ ಸಹಕಾರವನ್ನು ಮಾಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಲಿತ ವಿದ್ಯೆಗೆ ತಕ್ಕಂತೆ ಯುವಕರಿಗೆ ಯಾವುದೇ ಉದ್ಯೋಗ ಸೃಷ್ಠಿಗೆ ಬಿಜೆಪಿ ಅವಕಾಶವನ್ನು ಮಾಡಿಲ್ಲ. ಇಂದು ಅನುಮತಿ ಇಲ್ಲದೆ ಬಂಡೆಯನ್ನು ಕಡಿದು ಮಾರಲಾಗುತ್ತಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಅವರು ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುಂಜಾಲು ಸರ್ಕಲ್ ಬಳಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಕಾಂಗ್ರೆಸ್ ಮುಖಂಡರಾದ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಸುಧಾಕರ್ ಶೆಟ್ಟಿ ಮೇರ್ಮಾಡಿ, ಭುಜಂಗ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಗೋಫಿ ನಾಯ್ಕ್, ಮೊದಲಾದವರು ಉಪಸ್ಥಿತರಿದ್ದರು.