ಮಲ್ಪೆ ಪಡುಕರೆಯಲ್ಲಿ ಸಿದ್ಧರಾಮಯ್ಯ, ಡಿಕೆಶಿಗೆ ಶುಭಕೋರಿ ಹಾಕಲಾಗಿದ್ದ ಫ್ಲೆಕ್ಸನ್ನು ಹರಿದುಹಾಕಿದ ಕಿಡಿಗೇಡಿಗಳು

ಮಲ್ಪೆ ಪಡುಕರೆಯಲ್ಲಿ ಸಿದ್ಧರಾಮಯ್ಯ, ಡಿಕೆಶಿಗೆ ಶುಭಕೋರಿ ಹಾಕಲಾಗಿದ್ದ ಫ್ಲೆಕ್ಸನ್ನು ಹರಿದುಹಾಕಿದ ಕಿಡಿಗೇಡಿಗಳು

ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ರವರಿಗೆ ಅಭಿಮಾನಿಗಳು ಶುಭಾಶಯ ಕೋರಿ ಮಲ್ಪೆ ಪಡುಕರೆ ಸೇತುವೆ ಬಳಿಯಲ್ಲಿ ಹಾಕಿದ್ದ ಫ್ಲೆಕ್ಸನ್ನು ಕಿಡಿಗೇಡಿಗಳು ಹರಿದುಹಾಕಿರುವ ಘಟನೆ ನಡೆದಿದೆ.

“ ಇಂತಹ ಭಯೋತ್ಪಾದನಾ ಚಟುವಟಿಕೆಯ ಕುರಿತು ನಾವೆಲ್ಲ ಆತಂಕಿತರಾಗಿದ್ದೇವೆ. ಪಡುಕರೆಗೆ ಶಾಲೆ, ರಸ್ತೆ, ನಳ್ಳಿ ನೀರು, ವಿದ್ಯುತ್, ಸಮುದ್ರಕ್ಕೆ ತಡೆಗೋಡೆ, ಮಲ್ಪೆ ಬಂದರು, ಸಬ್ಸಿಡಿ, ಸೇತುವೆ, ಜನರ ಹೊಟ್ಟೆ ತುಂಬಿಸಲು ಪಡಿತರ ಕೇಂದ್ರ ಇಂತಹ ಹಲವಾರು ಅಭಿವೃದ್ಧಿ ಯೋಜನೆಗಳನ್ನು ನೀಡಿದ್ದು ಕಾಂಗ್ರೆಸ್ ಸರಕಾರವೇ ಹೊರತು ಮತ್ಯಾವುದೇ ಪಕ್ಷವಲ್ಲ. ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯಲು ಹಾನಿಕಾರಕ ಮನಸ್ಥಿಯುಳ್ಳವರು ಮೊದಲ ಸಾಲಿನಲ್ಲಿರುತ್ತಾರೆ. ಫ್ಲೆಕ್ಸ್ ಹರಿಯುವ, ಮತ್ತೊಬ್ಬನನ್ನು ತುಳಿಯುವ, ವ್ಯಕ್ತಿ - ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಭಂಧಿಸುವ ಸರ್ವಾಧಿಕಾರದ ಈ ಭಯೋತ್ಪಾದನೆ ನಿಲ್ಲಬೇಕಾದ ಅನಿವಾರ್ಯತೆ ಇದೆ” ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯ ಪಡುಕರೆಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article