
ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಣದ ಅಧ್ಯಕ್ಷರಾಗಿ ರಾಹುಲ್ ಮನೋಜ್ ಕುಮಾರ್ ನೇಮಕ
Tuesday, May 30, 2023
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ರಾಹುಲ್ ಮನೋಜ್ ಕುಮಾರ್ ರನ್ನು ನೇಮಕ ಮಾಡಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಮನು ಜೈನ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಮನೋಜ್ ಕುಮಾರ್ ಅವರು ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣವನ್ನು ಯಶಸ್ವಿಯಾಗಿ ನಿರ್ವಹಿಸಿರುವುದರಿಂದ ಅವರನ್ನು ಅಧ್ಯಕ್ಷರಾಗಿ ಭಡ್ತಿ ನೀಡಲಾಗಿದೆ ಎಂದು ನೇಮಕಾತಿ ಪತ್ರದಲ್ಲಿ ತಿಳಿಸಲಾಗಿದೆ.