ಮೂವತ್ತಕ್ಕೂ ಹೆಚ್ಚು ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ; ಪಕ್ಷದ ಧ್ವಜ ನೀಡಿ ಸ್ವಾಗತಿಸಿದ ಮುನಿಯಾಲು ಉದಯ ಶೆಟ್ಟಿ
Monday, April 17, 2023
ಕಾರ್ಕಳ: ಪಳ್ಳಿ ನಿಂಜೂರು ಗ್ರಾಮೀಣ ಸಮಿತಿಯ ಅಧ್ಯಕ್ಷ ವಿಶ್ವನಾಥ ಬಂಡಾರಿ ನೇತ್ರತ್ವದಲ್ಲಿ ಅಭಿನಂದನ್ ಶೆಟ್ಟಿ ಮತ್ತು ಸುಮಾರು ಮೂವತ್ತಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರಿದರು.
ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಯಾದ ಮುಣಿಯಾಲ್ ಉದಯ ಶೆಟ್ಟಿ ಹಾಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಅವರು ಪಕ್ಷದ ಧ್ವಜ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.