ಚುನಾಣಾ ಪ್ರಚಾರದ ಮಧ್ಯೆ ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನ, ಶ್ರೀ ಬ್ರಹ್ಮ ಬೈದರ್ಕಳ ಆದಿ ಗರೋಡಿಗೆ ಭೇಟಿ ನೀಡಿ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ
Friday, May 5, 2023
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಪ್ರದೇಶದ ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಪಣಿಯೂರು ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಆದಿ ಗರೋಡಿ ಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭ ಬಾಲಕೃಷ್ಣ ಪಣಿಯೂರು ಇವರಿಂದ ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್, ಶಕ್ತಿಕೇಂದ್ರ ಅಧ್ಯಕ್ಷರಾದ ಸುರೇಶ್ ದೇವಾಡಿಗ, ಬಿಜೆಪಿ ಮುಖಂಡರಾದ ಸುರೇಂದ್ರ ಪಣಿಯೂರು, ಹಿಂದುಳಿದ ಮೋರ್ಚಾ ಕಾಪು ಮಂಡಲ ಉಪಾಧ್ಯಕ್ಷರು ನಾಗೇಶ್ ಆಚಾರ್ಯ,ಶಂಕರ್ ಗುರಿಕಾರು,ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್,ಭೂತ್ ಅಧ್ಯಕ್ಷರು ನಿತೇಶ್ ಕುಲಾಲ್,ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.