ದುರಹಂಕಾರ, ದ್ವೇಷ, ಭ್ರಷ್ಟಾಚಾರವನ್ನು ಸೋಲಿಸಿದ್ದಕ್ಕಾಗಿ ಕನ್ನಡಿಗರಿಗೆ ಧನ್ಯವಾದ ಹೇಳಿದ ಆರ್‌ಬಿಐ ಮಾಜಿ ಗವರ್ನರ್
Saturday, May 13, 2023
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು, "ದುರಹಂಕಾರ, ದ್ವೇಷ ಮತ್ತು ಭ್ರಷ್ಟಾಚಾರವನ್ನು ಸೋಲಿಸಿದ್ದಕ್ಕಾಗಿ ಕನ್ನಡಿಗರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ದುರಂಕಾರ, ದ್ವೇಷ ಸೋಲಿಸಿ, ಸಹೋದರತ್ವ, ಕನ್ನಡದ ಹೆಮ್ಮೆ ಮತ್ತು ಪ್ರಗತಿಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು ಎಂದು ರಘುರಾಮ್ ರಾಜನ್ ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮವಾದ ಭಾರತ್ ಜೋಡೋ ಯಾತ್ರೆಯಲ್ಲಿ ರಾಜನ್ ಅವರು ರಾಹುಲ್ ಗಾಂಧಿ ಮತ್ತು ಸಚಿನ್ ಪೈಲಟ್ ಅವರೊಂದಿಗೆ ಹೆಜ್ಜೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
ನೋಟು ಅಮಾನ್ಯೀಕರಣವನ್ನು ತೀವ್ರವಾಗಿ ಟೀಕಿಸಿದ್ದ ಮಾಜಿ ಆರ್‌ಬಿಐ ಮುಖ್ಯಸ್ಥ, ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು.