ಮುಖ್ಯಮಂತ್ರಿಯಾಗಿ ಘೋಷಣೆಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ನೀಡಿದ ಮೊದಲ ಪ್ರತಿಕ್ರಿಯೆ ಏನು...? ಗ್ಯಾರಂಟಿಗಳ ಬಗ್ಗೆ ಹೇಳಿದ್ದೇನು...?
ಬೆಂಗಳೂರು: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ನೂತನ ಮುಖ್ಯಮಂತ್ರಿಯಾಗಿ ಘೋಷಣೆಯಾಗಿರುವ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಘೋಷಣೆ ಮಾಡುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ಸಿನ 5 ಗ್ಯಾರಂಟಿಗಳ ಬಗ್ಗೆ ವ್ಯಂಗ್ಯವಾಡುತ್ತಿದ್ದವರಿಗೆ ಪರೋಕ್ಷವಾಗಿ ತಿವಿದಿದ್ದಾರೆ.
ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ (BJP), ಜೆಡಿಎಸ್ (JDS) ಹಾಗೂ ಇತರರಿಗೂ ಬಿಸಿ ಮುಟ್ಟಿಸಿದೆ. ಈ ಅದ್ಭುತ ಗೆಲುವಿಗೆ ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿ (5 guarantee) ಯೋಜನೆಗಳ ಪಾಲೂ ದೊಡ್ಡದಿದೆ. ಚುನಾವಣೆಗೂ ಮುನ್ನವೇ ರಾಜ್ಯದ ಜನಸಾಮಾನ್ಯರು, ಗೃಹಿಣಿಯರು, ನಿರುದ್ಯೋಗಿಗಳು, ರೈತರು ಸೇರಿದಂತೆ ಹಲವು ವರ್ಗಗಳವನ್ನು ಗುರುಯಾಗಿಸಿಕೊಂಡು 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದ್ದು, ಇದೀಗ ಆ 5 ಗ್ಯಾರಂಟಿಗಳನ್ನು ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರ ಕೂಗು ಜೋರಾಗುತ್ತಿದೆ.