ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್: ಅಧಿಕೃತವಾಗಿ ಘೋಷಣೆ

ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್: ಅಧಿಕೃತವಾಗಿ ಘೋಷಣೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್​ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತವಾಗಿ ಘೋಷಣೆ ಮಾಡಿದೆ.

ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸುರ್ಜೇವಾಲಾ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಈ ವೇಳೆ ಒಂದೇ ಡಿಸಿಎಂ ಹುದ್ದೆ ಸರ್ಕಾರದಲ್ಲಿ ಇರಲಿದೆ. ಕರ್ನಾಟಕ ಜನರ ಸೇವೆ ಮಾಡಲು ಕಾಂಗ್ರೆಸ್‌ ಬದ್ಧವಾಗಿದೆ. 5 ಗ್ಯಾರಂಟಿಗಳನ್ನು ಸರ್ಕಾರ ಈಡೇರಿಸಲಿದೆ ಎಂದು ವಿವರಿಸಿದರು. 

ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದು ಹೇಳಿದರು.

ಡಿಕೆ ಶಿವಕುಮಾರ್​ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರಿಯಲಿದ್ದಾರೆಂದು ತಿಳಿಸಿದರು.

ಮೇ 20ರಂದು ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಮೇ 20ರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಮೇ 20ರಂದು ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಅವರು ಮಾಹಿತಿ ನೀಡಿದ್ದಾರೆ.

ಈ ನಡುವೆ ನವಹೆದಲಿಯ ರಾಜಾಜಿ ಮಾರ್ಗ್10ರಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article