ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಮಧ್ಯೆ ಮುಂದುವರಿದ ಬಿಗ್ ಫೈಟ್; ಇಂದು ಸಂಜೆಯೊಳಗೆ ನೂತನ ಮುಖ್ಯಮಂತ್ರಿಯ ಘೋಷಣೆ

ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಮಧ್ಯೆ ಮುಂದುವರಿದ ಬಿಗ್ ಫೈಟ್; ಇಂದು ಸಂಜೆಯೊಳಗೆ ನೂತನ ಮುಖ್ಯಮಂತ್ರಿಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನೂತನ ಮುಖ್ಯಮಂತ್ರಿಗಾಗಿ ಸಿದ್ದರಾಮಯ್ಯ ಹಾಗು ಡಿ.ಕೆ.ಶಿವಕುಮಾರ್ ಮಧ್ಯೆ ಬಿಗ್ ಫೈಟ್ ನಡೆಯುತ್ತಿದ್ದು, ಇಂದು ಸಂಜೆಯೊಳಗೆ ನೂತನ ಮುಖ್ಯಮಂತ್ರಿಯ ಘೋಷಣೆ ನಡೆಯಲಿದೆ.

ಶಾಸಕರು ಈ ಬಗ್ಗೆ ತಮ್ಮ ನಿರ್ಧಾರವನ್ನು ಹೈಕಮಾಂಡಿಗೆ ತಿಳಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ.

ಶಿವಕುಮಾರ್ ಅವರೊಂದಿಗೆ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲು ಸಿದ್ಧರಿದ್ದಾರೆ ಎಂಬ ಸಲಹೆಯನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟಿದ್ದಾರೆ ಎಂದು ಎಐಸಿಸಿ ಮೂಲಗಳು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿವೆ.

ಆದರೆ, ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ದಾರೆ ಮತ್ತು ಮೊದಲ 2 ವರ್ಷಗಳ ನಂತರ ಅಧಿಕಾರವನ್ನು ತ್ಯಜಿಸುತ್ತಾರೆ ಮತ್ತು ಉಳಿದ ಅವಧಿಯಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಬಹುದು ಎಂದು ಮೂಲಗಳು ತಿಳಿಸಿವೆ. 

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಕುರುಬ ಸಮುದಾಯ ಮತ್ತು ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿದ್ದು, ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಸಂಕಷ್ಟದ ಪರಿಸ್ಥಿತಿಯಲ್ಲಿದೆ.

ಕಾಂಗ್ರೆಸ್ ಹೈಕಮಾಂಡ್ ಸೋಮವಾರವೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಈಗಾಗಲೇ ಆಯ್ಕೆಯಾಗಿರುವ ಹೆಚ್ಚಿನ ಶಾಸಕರು ಹೈಕಮಾಂಡಿಗೆ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದು, ಡಿ.ಕೆ.ಶಿವ ಕುಮಾರ್ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತನಗೆ ಮುಖ್ಯಮಂತ್ರಿ ಪಟ್ಟ ನೀಡದಿದ್ದರೆ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಹೈಕಮಾಡಿಗೆ ತನ್ನ ನಿರ್ಧಾರವನ್ನು ಮುಟ್ಟಿಸಿದ್ದಾರೆ.

ಎಐಸಿಸಿ ವೀಕ್ಷಕರಾದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರೊಂದಿಗೆ ಸಮಾಲೋಚಿಸಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷರು ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ.

Ads on article

Advertise in articles 1

advertising articles 2

Advertise under the article