SSLCಯಲ್ಲಿ 625ಕ್ಕೆ 625 ಅಂಕ ಪಡೆದು ಟಾಪರ್ ಆದ 4 ವಿದ್ಯಾರ್ಥಿಗಳು!
ಬೆಂಗಳೂರು: ಈ ಬಾರಿಯೂ ಎಂದಿನಂತೆ ಬಾಲಕಿಯರು, ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ SSLCಯಲ್ಲಿ ಮೇಲುಗೈ ಸಾಧಿಸಿದ್ದು, 4 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಟಾಪರ್ ಆಗಿದ್ದಾರೆ.
ಈ ಬಾರಿ 4 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ. ಭೂಮಿಕಾ ಪೈ- ಬೆಂಗಳೂರಿನ ನ್ಯೂ ಮೆಕಾಲ ಇಂಗ್ಲೀಷ್ ಸ್ಕೂಲ್ ಹೊಸೂರು ರಸ್ತೆ, ಯಶಸ್ ಗೌಡ – ಬಾಲಗಂಗಾಧರನಾಥ ಹೈಸ್ಕೂಲ್ ಚಿಕ್ಕಬಳ್ಳಾಪುರ, ಅನುಪನಾ ಶ್ರೀಶೈಲ ಹಿರೇಹೋಳಿ- ಕುಮಾರೇಶ್ವರ ಶಾಲೆ ಸವದತ್ತಿ, ಭೀಮನಗೌಡ ಹನುಮಂತಗೌಡ ಪಾಟೀಲ್ – ಆಕ್ಸ್ ಫರ್ಡ್ ಇಂಗ್ಲೀಷ್ ಶಾಲೆ, ಮುದ್ದೇಬಿಹಾಳ ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ನಡೆದಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 83.89% ಫಲಿತಾಂಶ ಬಂದಿದ್ದು, ಕಳೆದ ಬಾರಿ ಫಲಿತಾಂಶಕ್ಕೆ ಹೋಲಿಕೆ ಮಾಡಿದ್ರೆ 1.24% ಫಲಿತಾಂಶ ಕಡಿಮೆ ಬಂದಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದು, ಗ್ರಾಮೀಣ ಭಾಗದ ಮಕ್ಕಳು ನಗರ ಭಾಗದ ಮಕ್ಕಳಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ.
ಈ ಬಾರಿ 835102 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 700619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 83.89 ರಷ್ಟು ಫಲಿತಾಂಶ ಬಂದಿದೆ. 4,25,968 ಬಾಲಕರು ಪರೀಕ್ಷೆ ಬರೆದಿದ್ದು, ಇದರಲ್ಲಿ 3,41,108 ಬಾಲಕರು ತೇರ್ಗಡೆಯಾಗಿದ್ದಾರೆ ಶೇ. 80.08 ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. 4,09,134 ಬಾಲಕಿಯರು ಪರೀಕ್ಷೆ ಬರೆದಿದ್ದು 3,59,511 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಶೇ. 87.87ರಷ್ಟು ಫಲಿತಾಂಶ ಬಂದಿದೆ.
ನಗರ ಪ್ರದೇಶದಲ್ಲಿ 3,51,392 ವಿದ್ಯಾರ್ಥಿಗಳಲ್ಲಿ 2,79,773 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.79.62 ರ ಫಲಿತಾಂಶ ಪಡೆದರೆ, ಗ್ರಾಮೀಣ ಭಾಗದಲ್ಲಿ 4,83,710 ವಿದ್ಯಾರ್ಥಿಗಳಲ್ಲಿ 4,20,846 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.87 ರಷ್ಟು ಫಲಿತಾಂಶ ಪಡೆದಿದ್ದಾರೆ. ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. 1,517 ಸರ್ಕಾರಿ ಶಾಲೆ ಗಳಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಸರ್ಕಾರಿ ಶಾಲೆ ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ.
ಅನುದಾನಿತ ಶಾಲೆಗಳಲ್ಲಿ 482 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, 11 ಶಾಲೆಗಳು ಶೂನ್ಯ ಫಲಿತಾಂಶ ಪಡೆದಿದೆ. ಅನುದಾನರಹಿತ ದಲ್ಲಿ 1824 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿದ್ದು, 23 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಒಟ್ಟು 3,823 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿದ್ದು, 34 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಕನ್ನಡದಲ್ಲಿ 14,983 ವಿದ್ಯಾರ್ಥಿಗಳು, ಇಂಗ್ಲಿಷ್‌ನಲ್ಲಿ 9,754, ಹಿಂದಿಯಲ್ಲಿ 16,170, ಗಣಿತ 2,132, ವಿಜ್ಞಾನ 983 ಹಾಗು ಸಮಾಜ ವಿಜ್ಞಾನದಲ್ಲಿ 8,311 ವಿದ್ಯಾರ್ಥಿಗಳು ಶೇ.100 ಅಂಕ ಪಡೆದುಕೊಂಡಿದ್ದಾರೆ.
ಈ ವರ್ಷ 10% ಅಂಕಗಳನ್ನು 3 ವಿಷಯಗಳಿಗೆ ಗ್ರೇಸ್ ರೂಪದಲ್ಲಿ ನೀಡಲಾಗಿದ್ದು, 59,246 ವಿದ್ಯಾರ್ಥಿಗಳು ಗ್ರೇಸ್ ಅಂಕ ಪಡೆದು ಪಾಸ್ ಆಗಿದ್ದಾರೆ. ಪೂರಕ ಪರೀಕ್ಷೆಗೆ ಮುಂದಿನ ವಾರ ವೇಳಾಪಟ್ಟಿ ಪ್ರಕಟ ಮಾಡಲಾಗುತ್ತೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.
ಫೋಟೋ ಕಾಪಿ ಪಡೆಯಲು ಕೊನೆ ದಿನ ಮೇ 14ಕ್ಕೆ ನಿಗದಿ ಮಾಡಲಾಗಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಕೊನೆ ದಿನ ಮೇ 21 ಹಾಗೂ ಪೂರಕ ಪರೀಕ್ಷೆಗೆ ನೋಂದಣಿಗೆ ಕೊನೆ ದಿನ ಮೇ 15ಕ್ಕೆ ನಿಗದಿ ಮಾಡಲಾಗಿದೆ.