ಕಾರ್ಕಳ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಇಂದು ಕ್ಷೇತ್ರ ವ್ಯಾಪ್ತಿಯ ದುರ್ಗಾ ಮತ್ತು ನಲ್ಲೂರು ಗ್ರಾಮದ ಮತದಾರರನ್ನು ಭೇಟಿ ಮಾಡಿ ಮತ ಯಾಚನೆ ನಡೆಸಿದರು.
ಮನೆಮನೆಗಳಿಗೆ ತೆರಳಿ ಅಲ್ಲಿ ಸಭೆ ನಡೆಸುವ ಮೂಲಕ ತಾನು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟರು. ಈ ಬಾರಿ ಮತ್ತೆ ಶಾಸಕನಾಗಿ ಆಯ್ಕೆಯಾದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು.
ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಇದೆ ವೇಳೆ ಮತದಾರರಲ್ಲಿ ಮನವಿ ಮಾಡಿಕೊಂಡರು.




