ಈ ಬಾರಿ ಕಾಂಗ್ರೆಸಿಗೆ ಪೂರಕ ವಾತಾವರಣವಿದೆ: ಪ್ರಸಾದ್ ರಾಜ್ ಕಾಂಚನ್
Tuesday, May 2, 2023
ಉಡುಪಿ: ಇಂದು ಕಾಂಗ್ರೆಸ್'ಗೆ ಪೂರಕ ವಾತಾವರಣವಿದ್ದು, ನಗರಭಾಗದಲ್ಲಿ ಕಾಂಗ್ರೆಸ್ಸಿಗೆ ಈ ಬಾರಿ ದೊಡ್ಡಮಟ್ಟದಲ್ಲಿ ಅವಕಾಶವಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.
ಅವರು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ನ ಬೂತ್ ಅಧ್ಯಕ್ಷರ ಮತ್ತು ಬಿ ಎಲ್ ಎ 2 ಮತ್ತು ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಲೋಕಸಭಾ ಸದಸ್ಯ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಉಸ್ತುವಾರಿಗಳಾದ ಪ್ರತಾಪನ್, ಕೇರಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೌಷಾದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಪೂರ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಖ್ಯಾತ್ ಶೆಟ್ಟಿ,, ಮಹಾಬಲ ಕುಂದರ್, ಗಣೇಶ್ ನೆರ್ಗಿ, ಪ್ರಶಾಂತ ಪೂಜಾರಿ, ರವಿರಾಜ್ ರಾವ್, ಕೀರ್ತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.