ಯುವತಿಯರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಬಂಧನ

ಯುವತಿಯರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಬಂಧನ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವತಿಯರ ಅಶ್ಲೀಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.

‘ಸಂಘಟನೆಯ ಸದಸ್ಯತ್ವ ಪಡೆಯುವ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಅಮಿಷ ಒಡ್ಡಿ ನಗ್ನ ಚಿತ್ರಗಳು ಚಿತ್ರೀಕರಿಸಿಕೊಳ್ಳಲಾಗಿದೆ. ನಂತರ ಬೆದರಿಕೆ, ಬ್ಲಾಕ್‌ಮೇಲ್‌ ಮಾಡಲು ವಿಡಿಯೊ ಬಳಸಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರು ಒಪ್ಪದಿದ್ದಾಗ, ಅಶ್ಲೀಲ ವಿಡಿಯೊಗಳನ್ನು ಪ್ರತೀಕ್ ವಾಟ್ಸ್‌ಆ್ಯಪ್‌ನಲ್ಲಿ ಹರಿಬಿಟ್ಟಿದ್ದ’ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ (ಎಬಿವಿಪಿ) ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಆರೋಪಿ ಬಂಧನದ ಬಳಿಕ ವಿಡಿಯೋ ವೈರಲ್‌ ಬಗ್ಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ. ಅಶ್ಲೀಲ ಫೋಟೊ, ವಿಡಿಯೋಗಳನ್ನು ವಾಟ್ಸಪ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿರುವುದು ಗೊತ್ತಾಗಿದೆ. ಈ ರೀತಿ ಷೇರ್‌ ಮಾಡುವುದು ಮತ್ತು ಸ್ಟೋರ್‌ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ 67 (E) ಅಡಿ ಶಿಕ್ಷಾರ್ಹ ಅಪರಾಧ. ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ. ಈ ಕುರಿತು ಗ್ರೂಪ್‌ ಅಡ್ಮಿನ್‌ಗಳು ಕೂಡ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅವನು ಯಾವ ಸಂಘಟನೆ ಮುಖಂಡನೋ, ಅವನೊಬ್ಬ ಕೊಳಕು ಮನುಷ್ಯ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿ ಜೊತೆ ಮಾತನಾಡ್ತೇನೆ.ಅವನ ಬಗ್ಗೆ ಏನು ಬೇಕಾದರೂ ಕ್ರಮ ಕೈಗೊಳ್ಳಲಿ. ಗಾಂಜಾ, ಅಫೀಮು ಆರಂಭವಾಗಿದೆ. ಇದನ್ನು ಮಟ್ಟ ಹಾಕಲು ಪೋಷಕರು ಗಮನ ಹರಿಸಬೇಕು. 3-4 ದಿನದಲ್ಲಿ ಶಾಲಾ ಕಾಲೇಜು ಮುಖ್ಯಸ್ಥರು ಪೊಲೀಸರ ಸಭೆ ಕರೆದು ಚರ್ಚೆ ಮಾಡ್ತೇನೆ. ಕೇವಲ ತೀರ್ಥಹಳ್ಳಿ ಅಲ್ಲ, ರಾಜ್ಯದ ಎಲ್ಲಾ ಕಡೆ ಇದು ಇದೆ ಎಂದರು.

Ads on article

Advertise in articles 1

advertising articles 2

Advertise under the article