ಶಕ್ತಿ ಯೋಜನೆಗೆ ಚಾಲನೆ ನೀಡಿದ ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ

ಶಕ್ತಿ ಯೋಜನೆಗೆ ಚಾಲನೆ ನೀಡಿದ ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯ  ಸರ್ಕಾರ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದು, ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಒಂದೇ ದಿನ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್​ನಲ್ಲಿ ಪ್ರಯಾಣ ಮಾಡಿದ್ದಾರೆ.

ನಿನ್ನೆ ಮಧ್ಯಾಹ್ನ 1ರಿಂದ ರಾತ್ರಿ 12ರವರೆಗೆ ಒಟ್ಟು 5.71 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಈ ಪೈಕಿ ಬಿಎಂಟಿಸಿ ಬಸ್​ನಲ್ಲಿ ಒಟ್ಟು 2,01,215, ವಾಯವ್ಯ ಸಾರಿಗೆ ಬಸ್​ನಲ್ಲಿ 1,22,354, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623, ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಯಾಣದ ಟಿಕೆಟ್​​ ವೆಚ್ಚ 1,40,22,878 ರೂ. ಆಗಿದೆ.

Ads on article

Advertise in articles 1

advertising articles 2

Advertise under the article