ಚಾರ್ಮಾಡಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಸ್; ಮಾಗುಂಡಿ ಗ್ರಾಮದ ಯುವಕ ಸ್ಥಳದಲ್ಲಿಯೇ ಸಾವು
Monday, June 5, 2023
ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಮೃತಪಟ್ಟ ಘಟನೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ.
KSRTC ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಡೆದಿದೆ. ಮಾಗುಂಡಿ ಗ್ರಾಮದ ಇರ್ಫಾನ್(29) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಸಹ ಸ್ಥಿತಿ ಗಂಭೀರವಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಸ್ಕೂಟಿ ನಿಯಂತ್ರಣ ತಪ್ಪಿದ್ದು, KSRTC ಬಸ್ಸಿನ ಹಿಂಬದಿ ಚಕ್ರಕ್ಕೆ ಸವಾರ ಸಿಲುಕಿದ್ದಾನೆ. ಚಿಕ್ಕಮಗಳೂರು – ದಕ್ಷಿಣಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ KSRTC ಬಸ್ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ.