ಗೃಹ ಜ್ಯೋತಿ ಯೋಜನೆ ನೋಂದಣಿಗೆ ಗ್ರಾಹಕರಿಂದ 20 ರೂಪಾಯಿಗಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದವರ ವಿರುದ್ಧ ಕ್ರಮ: ಎಚ್ಚರಿಕೆ ನೀಡಿದ ಸರಕಾರ

ಗೃಹ ಜ್ಯೋತಿ ಯೋಜನೆ ನೋಂದಣಿಗೆ ಗ್ರಾಹಕರಿಂದ 20 ರೂಪಾಯಿಗಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದವರ ವಿರುದ್ಧ ಕ್ರಮ: ಎಚ್ಚರಿಕೆ ನೀಡಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸುವಾಗ ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. 

ಗೃಹ ಜ್ಯೋತಿಯ ನೋಂದಣಿ ಸಂಪೂರ್ಣ ಉಚಿತವಾಗಿದೆ, ಸರ್ಕಾರ ನಿಗದಿಪಡಿಸಿದ ಸೇವಾ ಶುಲ್ಕ 20 ರೂಪಾಯಿಗಳನ್ನು ಹೊರತುಪಡಿಸಿ ನೋಂದಣಿಗಾಗಿ ಗ್ರಾಹಕರು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 

ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಗ್ರಾಹಕರಿಂದ 20 ರೂಪಾಯಿಗಿಂತ ಹೆಚ್ಚುವರಿ ನೋಂದಣಿ ಶುಲ್ಕ ವಸೂಲಿ ಮಾಡುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದೆ. ಯಾವುದೇ ಕೇಂದ್ರಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರಿಂದ ಹಣ ಪಡೆದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. 

ನಂತರ ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

34 ಲಕ್ಷ ಮಂದಿ ನೋಂದಣಿ: ಗೃಹ ಜ್ಯೋತಿ ಯೋಜನೆಗೆ ಮೊನ್ನೆ ನಿನ್ನೆ ಶುಕ್ರವಾರದವರೆಗೆ 30 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article