1ರಿಂದ 8ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ರಾಜ್ಯ ಸರಕಾರ ಆದೇಶ

1ರಿಂದ 8ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು: 1ರಿಂದ 8ನೇ ತರಗತಿಯವರೆಗೆ ಓದುತ್ತಿರುವ ಶಾಲಾ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರ  ಬುಧವಾರ ಆದೇಶ ಹೊರಡಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಶುಭ ಕಲ್ಯಾಣ್ ಸುತ್ತೋಲೆ ಬಿಡುಗಡೆ ಮಾಡಿದ್ದು, ರಾಜ್ಯಾದ್ಯಂತ ಇರುವ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಸಿಬ್ಬಂದಿಗೆ ಬೇಯಿಸಿದ ಮೊಟ್ಟೆಯನ್ನು ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಪೂರಕವಾಗಿ ನೀಡುವಂತೆ  ಸೂಚಿಸಿದ್ದಾರೆ. ಮೊಟ್ಟೆ ತಿನ್ನದಿರುವವರಿಗೆ ಬಾಳೆಹಣ್ಣು ಅಥವಾ ಚಿಕ್ಕಿ (ಕಡಲೆಕಾಯಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ಖಾದ್ಯ) ನೀಡುವಂತೆ ತಿಳಿಸಿದ್ದಾರೆ.

ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಹೋಗಲಾಡಿಸಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕಗಳನ್ನು ನೀಡಲಾಗುವುದು. ಜುಲೈ 15ರವಗೆ ಮೊದಲ ಹಂತದಲ್ಲಿ ವಾರಕ್ಕೊಮ್ಮೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ಸರ್ಕಾರ ಮುಂದಾಗಿದೆ.

ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ಪ್ರತಿಯೊಂದಕ್ಕೂ 8 ರೂ. ನೀಡಿ ಖರೀದಿಸಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.

ಈ ಹಿಂದೆ ಕರ್ನಾಟಕ ಸರ್ಕಾರದ ಈ ನಿರ್ಧಾರ ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಈ ನಿರ್ಧಾರವು ಸಮಾಜದ ಒಂದು ವರ್ಗವನ್ನು ಕೆರಳಿಸಿತು. ಇದು ಶಾಲೆಗೆ ಹೋಗುವ ಮಕ್ಕಳಲ್ಲಿ ತಾರತಮ್ಯ ಉಂಟುಮಾಡುವ ಕಾರಣ ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ವಿತರಿಸಬಾರದು ಎಂದು ಒತ್ತಾಯಿಸಿದರು. ಮತ್ತೊಂದು ವಿಭಾಗವು ಈ ಯೋಜನೆಯನ್ನು ನಿಲ್ಲಿಸಬಾರದು ಎಂದು ಪ್ರತಿಪಾದಿಸಿದೆ. 


Ads on article

Advertise in articles 1

advertising articles 2

Advertise under the article