ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಇಲ್ಲಿದೆ ಸಂಪೂರ್ಣ ಮಾಹಿತಿ....
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ.
ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಈ ಆರ್ಥಿಕ ವರ್ಷದಿಂದಲೇ ಜಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಯಮ್ಮ ಹೇಳಿದರು.
ವಿಧಾನಸೌಧದಲ್ಲಿ ವಿಶೇಷ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, ನಾವು ನುಡಿದಂತೆ ನಡೆಯುವ ಸರಕಾರ ಎಂದರು.
ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ತೀರ್ಮಾನ ಮಾಡಿದ್ದೇವೆ. ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆಗಳನ್ನು ನೋಡದೇ ಎಲ್ಲ ಜನರಿಗೆ ನೀಡುತ್ತೇವೆ.
ಯುವನಿಧಿ ಯೋಜನೆ ಅಡಿ 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿ, ನೋಂದಾಯಿಸಿಕೊಂಡವರಿಗೆ ಪ್ರತಿ ತಿಂಗಳು ಪಧವಿದರರಿಗೆ 3 ಸಾವಿರ ರೂ., ಡಿಪ್ಲೋಮಾದವರಿಗೆ 1.500 ಸಾವಿರ ರೂ. 24 ತಿಂಗಳು ನೀಡುತ್ತೇವೆ. ಆದರೆ ಇದರ ಒಳಗೆ ಯಾರಾದರೂ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಸೇರಿದರೇ ಅವರಿಗೆ ನೀಡುವುದಿಲ್ಲ. ಇವರು ನಿರುದ್ಯೋಗಿಗಳು ಎಂದು ಘೋಷಿಸಿಕೊಂಡಿರಬೇಕು. ಮತ್ತು ಇದಕ್ಕೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಸಂಚರಿಸಬಹುದಾಗಿದೆ. ಆದರೆ ರಾಜ್ಯದ ಒಳಗೆ ಮಾತ್ರ. ಆದರೆ ಎಸಿ ಮತ್ತು ಲಗ್ಜುರಿ ಬಸ್ಗಳು ಹೊರತುಪಡಿಸಿ ಈ ತಿಂಗಳು 11ನೇ ತಾರಿಕಿನಿಂದ ಸಂಚರಿಸಬಹುದು.
ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಜರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.
ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.