ಹತ್ಯೆಗೀಡಾದ ಮಸೂದ್‌, ಮಹಮ್ಮದ್‌ ಫಾಝಿಲ್‌, ದೀಪಕ್‌ ರಾವ್‌ ಸೇರಿದಂತೆ 6 ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್'ಗಳನ್ನು ವಿತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹತ್ಯೆಗೀಡಾದ ಮಸೂದ್‌, ಮಹಮ್ಮದ್‌ ಫಾಝಿಲ್‌, ದೀಪಕ್‌ ರಾವ್‌ ಸೇರಿದಂತೆ 6 ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್'ಗಳನ್ನು ವಿತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಸರ್ವ ಜಾತಿ-ಧರ್ಮದವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ 6 ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಸಿದ್ದರಾಮಯ್ಯ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ಮಸೂದ್‌, ಮಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ಇದ್ರಿಷ್ ಪಾಷಾ, ಸಭಾನಸಾಬ್ ಹಾಗೂ ದೀಪಕ್‌ ರಾವ್‌ ಕುಟುಂಬದವರಿಗೆ ಪರಿಹಾರ ವಿತರಿಸಿದರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ರಾಜಕೀಯ ಕಾರ್ಉದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article