ಮಣಿಪುರ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ಮೋದಿ ಅಮೆರಿಕ ಪ್ರವಾಸದ ಸಿದ್ಧತೆಯಲ್ಲಿ ಬ್ಯುಸಿ: ಕಾಂಗ್ರೆಸ್ ಟೀಕೆ
ನವದೆಹಲಿ: ಈಶಾನ್ಯ ರಾಜ್ಯ ಮಣಿಪುರ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಯ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ.
ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಜೈ ರಾಮ್ ರಮೇಶ್, ಈಶ್ಯಾನ್ಯ ರಾಜ್ಯದಲ್ಲಿ ಇನ್ನೂ ಹಿಂಸಾಚಾರ ಮುಂದುವರೆದಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರ ಸಚಿವರೊಬ್ಬರ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ನೂ ಮೌನವಾಗಿದ್ದಾರೆ. ಮಣಿಪುರವು ಹೊತ್ತಿ ಉರಿಯುತ್ತಿರುವಾಗ ಅಮೇರಿಕಾ ಭೇಟಿಯ ತಯಾರಿಯಲ್ಲಿ ತುಂಬಾ ನಿರತರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇಂಫಾಲ್‌ನ ಕೊಂಗ್ಬಾದಲ್ಲಿರುವ ತಮ್ಮ ನಿವಾಸವನ್ನು ಗುರುವಾರ ತಡರಾತ್ರಿ ಉದ್ರಿಕ್ತ ಗುಂಪೊಂದು ಸುಟ್ಟು ಹಾಕಿದ್ದಾರೆ. ರಾತ್ರಿ 10 ಗಂಟೆಯ ಸುಮಾರಿಗೆ ನಡೆದ ಈ ಘಟನೆಯಲ್ಲಿ 50 ಕ್ಕೂ ಹೆಚ್ಚು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿರುವ ಬಗ್ಗೆ ಮಾಹಿತಿ ಇರುವುದಾಗಿ ಕೇಂದ್ರ ಸಚಿ ರಂಜನ್ ಸಿಂಗ್ ಹೇಳಿದ್ದರು. ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, 100 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.