ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಗೇಲಿ ಮಾಡಿದ ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ
Saturday, June 17, 2023
ನವೆದಹಲಿ: ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹಲವು ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸುವ ಮೂಲಕ ಸುಬ್ರಮಣಿಸ್ವಾಮಿ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ.