ಉಡುಪಿ ಎಸ್ಪಿ ಕಚೇರಿಯಲ್ಲಿ ಪ್ರಗತಿಪರಿಶೀಲನಾ ಸಭೆ ನಡೆಸಿದ ಗೃಹ ಸಚಿವ ಜಿ. ಪರಮೇಶ್ವರ್
Wednesday, June 7, 2023
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಚಿವರು ಜಿಲ್ಲಾ ಪೊಲೀಸ್ ಇಲಾಖೆಯ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಎಸ್ಪಿ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಸಚಿವರು ಭಾಗವಹಿಸಿದರು.
ಸಭೆಯಲ್ಲಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಎಎನ್ ಎಫ್ ಎಸ್ಪಿ ಪ್ರಕಾಶ್ ನಿಕ್ಕಿ, ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಎಎಸ್ಪಿ ಸಿದ್ದಲಿಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.